September 2, 2026

ಬೆಳ್ತಂಗಡಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಕಾರಣಕ್ಕೆ ಅಪ್ರಾಪ್ತ ಬಾಲಕ ಆತ್ಮಹತ್ಯೆ- ಪ್ರಕರಣ ದಾಖಲು

0
IMG-20211026-WA0010

ಬೆಳ್ತಂಗಡಿ: ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವುದರಿಂದ ನೊಂದುಕೊಂಡ ಅಪ್ರಾಪ್ತ ಬಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಳ್ತಂಗಡಿ ನಿವಾಸಿ ಸತೀಶ್‌ ಗೌಡ ಕೆ. (43) ಅವರು ನೀಡಿದ ದೂರಿನಂತೆ, ಅವರ ಸಂಬಂಧಿಕನಾದ ಅಪ್ರಾಪ್ತ ಬಾಲಕ ವಿದ್ಯಾಭ್ಯಾಸ ಮಾಡುತ್ತಿದ್ದನು. ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಬಗ್ಗೆ ನೊಂದುಕೊಂಡಿದ್ದ ಬಾಲಕ ಆ.30ರಂದು ಬೆಳಗ್ಗೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.


ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಸಂಖ್ಯೆ 64/2026, ಕಲಂ 194 ಭಾ.ನಾ.ಸು.ಸಂ. 2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ

Leave a Reply

Your email address will not be published. Required fields are marked *

error: Content is protected !!