ಬಂಟ್ವಾಳ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಡೈಮಂಡ್ ಶಾಲೆಯ ವೈಸ್ ಪ್ರಿನ್ಸಿಪಾಲ್ ಅನಿಲ್ ಎಸ್. ನಾಯಕ್ (72) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಮಲ್ ಕಟ್ಟೆ ಎಂಬಲ್ಲಿ ನಡೆದಿದೆ.
ಅನಿಲ್ ಎಸ್. ನಾಯಕ್ ಅವರು ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ರಾಮಲ್ ಕಟ್ಟೆ ಸಮೀಪ ರಸ್ತೆಯ ಎಡಬದಿಯಲ್ಲಿದ್ದ ತಡೆಗೋಡೆಗೆ ಸ್ಕೂಟಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಈ ಕುರಿತು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





