ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ: ಪ್ರಯಾಣಿಕರು ಪಾರು
ಮಂಗಳೂರು: ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಎಕ್ಸ್ ಪ್ರೆಸ್ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಚರಂಡಿಗೆ ನುಗ್ಗಿ ಪಲ್ಟಿಯಾಗಿರುವ ಘಟನೆ ಪಣಂಬೂರು ಎಂಸಿಎಫ್ ಬಳಿಯ ರಾ.ಹೆ.66ರಲ್ಲಿ ಶುಕ್ರವಾರ ಬೆಳಗ್ಗೆ ನಡೆದಿರುವ ಬಗ್ಗೆ ವರದಿಯಾಗಿದೆ.
ಘಟನೆಯಿಂದ ಬೆಳ್ಮಣ್ ನಿವಾಸಿ ಆದಿತ್ಯ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಉಳಿದಂತೆ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚಿನ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಬಂದ ಮಂಗಳೂರು ಉತ್ತರ ಸಂಚಾರ ಪೊಲೀಸರು ಸಾರ್ವಜನಿಕರ ಸಹಕಾರದೊಂದಿಗೆ ಪಲ್ಟಿಯಾದ ಬಸ್ ನಲ್ಲಿದ್ದವರನ್ನು ಹೊರತೆಗೆದು ರಕ್ಷಿಸಿದ್ದಾರೆಂದು ತಿಳಿದು ಬಂದಿದೆ.





