September 8, 2026

ವಿಟ್ಲ: ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೂವರು ಆರೋಪಿಗಳ ಬಂಧನ

0

ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಬಾಲಕ ನೀಡಿದ ದೂರಿನ ಮೇರೆಗೆ, 2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಜವಾದ್,…

image_editor_output_image-1515262272-1788846423924

ವಿಟ್ಲ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಬಾಲಕ ನೀಡಿದ ದೂರಿನ ಮೇರೆಗೆ, 2026ರ ಫೆಬ್ರವರಿಯಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಜವಾದ್, ಶಹೀದ್, ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಸೇರಿದಂತೆ ಒಟ್ಟು ಆರು ಮಂದಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಲಾಗಿದೆ.

ಈ ಕುರಿತು ಸೆಪ್ಟೆಂಬರ್ 4ರಂದು ಬಾಲಕನ ದೂರಿನ ಆಧಾರದ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 185/2026ರಿಂದ 190/2026ರವರೆಗೆ ಒಟ್ಟು ಆರು ಪ್ರಕರಣಗಳು ದಾಖಲಾಗಿದ್ದು, ಪೋಕ್ಸೋ ಕಾಯ್ದೆ 2012ರ ಕಲಂ 4(2), 5(m), 6 ಹಾಗೂ 8ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಗಳ ಪೈಕಿ ಜವಾದ್, ಶಹೀದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಅವರನ್ನು ಬಂಧಿಸಿದ್ದಾರೆ.  ಈ ಮೂವರು ಆರೋಪಿಗಳು ಕೊಳ್ನಾಡು ಗ್ರಾಮದವರು ಎಂದು ತಿಳಿದು ಬಂದಿದೆ. ಬಳಿಕ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಮೂವರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ತನಿಖೆ ಮುಂದುವರಿದಿದ್ದು, ಉಳಿದ ಆರೋಪಿಗಳ ಪತ್ತೆ ಹಾಗೂ ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!