ಮಂಗಳೂರು: ಪೊಲೀಸ್ ಜಿಲ್ಲಾ ಕಾರಾಗೃಹಕ್ಕೆ ದಾಳಿ: ಖೈದಿಗಳಿಂದ 10 ಮೊಬೈಲ್ ಪತ್ತೆ
ಮಂಗಳೂರು: ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ 9 ಖೈದಿಗಳಿಂದ 10 ಮೊಬೈಲ್ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಜಿಲ್ಲಾ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕೈದಿಗಳು ನಿಷೇಧಿತ ಮೊಬೈಲ್ ಫೋನ್‌ಗಳನ್ನು ಬಳಕೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸೆ. 08 ರಂದು ರಾತ್ರಿ ಬರ್ಕೆ ಪೊಲೀಸ್ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
ಪ್ರಕರಣದ ತನಿಖೆಯ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಅನಿರೀಕ್ಷಿತವಾಗಿ ದಾಳಿ ನಡೆಸಿ ವಿವಿಧ ಕಡೆ ತಪಾಸಣೆ ನಡೆಸಿದಾಗ, ಎ-ಬ್ಲಾಕ್‌ನಲ್ಲಿದ್ದ ಕೈದಿಗಳ ಪೈಕಿ ಅಕ್ರಮವಾಗಿ 10 ಮೊಬೈಲ್ ಸ್ಮಾರ್ಟ್‌ಫೋನ್ ಗಳನ್ನು ಬಚ್ಚಿಟ್ಟುಕೊಂಡಿದ್ದನ್ನು ವಶಪಡಿಸಿಕೊಳ್ಳಲಾಗಿದೆ.
ಮೊಬೈಲ್ ಪತ್ತೆಯಾದ ಕೈದಿಗಳಾದ 1)ರಿಫತ್ ಅಲಿ 2) ಇಬ್ರಾಹಿಂ ಖಲೀಲ್ 3) ಅಸ್ಫಕ್ ಅಲಿಯಾಸ್ ಜುಟ್ಟು ಅಸ್ಫಕ್ 4) ಅರ್ಷದ್ 5) ದಾವುದ್ ಫರ್ವೇಜ್ 6) ನಝರತ್ ಅಲಿ 7) ಶಿಫಾನ್ 8) ಅಬ್ದುಲ್ ಸಾದೀಕ್ 9) ಅರ್ಫಜ್ ಎಂದು ಗುರುತಿಸಲಾಗಿದೆ.
ಖೈದಿಗಳಾದ ರಿಪತ್ ಅಲಿ , ಇರಾಹಿಂ, ಅಸ್ಪಕ್, ಅರ್ಷದ್ ಖೈದಿಗಳು ಇತ್ತೇಚೆಗೆ ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳು ಎನ್ನಲಾಗಿದೆ. ಕ್ರ.ಸಂ 5 ರಿಂದ 8 ರವರು ಎನ್.ಡಿ.ಪಿ.ಎಸ್ ಡ್ರಗ್ ಪೆಡ್ಲೇರ್ ಆರೋಪಿಗಳು . ಕ್ರ.ಸಂ 9 ನೇ ಕೈದಿಯು ಕಂಕನಾಡಿ ನಗರ ಠಾಣೆಯಲ್ಲಿ ದಾಖಲಾದ ಕೋಕಾ ಪ್ರಕರಣದ ಆರೋಪಿಯಾಗಿದ್ದಾನೆ.
ವಶಪಡಿಸಿಕೊಂಡಿರುವ ಮೊಬೈಲ್ ಫೋನ್ಗಳನ್ನು ಅವುಗಳ ಬಳಕೆ ಮತ್ತು ಪೂರೈಕೆಗೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ತನಿಖೆ ಮುಂದುವರಿದಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಇತರ ಮಾಹಿತಿಗಳನ್ನು ಸಹ ಪರಿಶೀಲಿಸಲಾಗುತ್ತಿದೆ.





