September 8, 2026

ಪುತ್ತೂರು: ದರ್ಬೆ ಗಲಾಟೆ ಪ್ರಕರಣ: ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ ಆರೋಪದಲ್ಲಿ 10 ಮಂದಿ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

0
IMG-20260908-WA0102

ಪುತ್ತೂರು: ಕೆಲ ದಿನಗಳ ಹಿಂದೆ ನಗರದ ದರ್ಬೆಯ ಜನಸೇವಾ ಕೇಂದ್ರವೊಂದರಲ್ಲಿ ಗ್ರಾಹಕರು ಮತ್ತು ಅಂಗಡಿ ಮಾಲಕರ ನಡುವಿನ ಗಲಾಟೆಯ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆಯೊಡ್ಡಿದ ಪ್ರಕರಣದ 10 ಮಂದಿ ಆರೋಪಿಗಳಿಗೆ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರುಗೊಳಿಸಿದೆ.

ಜನಸೇವಾ ಕೇಂದ್ರದಲ್ಲಿ ಲ್ಯಾಮಿನೇಶನ್ ಮಾಡಲೆಂದು ನೀಡಿದ್ದ ದಾಖಲೆ ಪತ್ರವೊಂದಕ್ಕೆ ಹಾನಿಯಾದ ವಿಚಾರದಲ್ಲಿ ಗ್ರಾಹಕರು ಮತ್ತು ಅಂಗಡಿ ಮಾಲಕರ ನಡುವೆ ಮಾತಿನ ಚಕಮಕಿ, ನಡೆದು ಗಲಾಟೆ ನಡೆದ ಸಂದರ್ಭ ಕರ್ತವ್ಯಕ್ಕೆ ಅಡ್ಡಿಪಡಿಸಿ, ಬೆದರಿಕೆಯೊಡ್ಡಿದ್ದ ಆರೋಪದಲ್ಲಿ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಪ್ರಕರಣದಲ್ಲಿ ಆರೋಪಿಗಳಾಗಿರುವ ಅಬ್ದುಲ್ ನಿಯಾಝ್ ಪೆರ್ನೆ(26), ಮುಹಮ್ಮದ್ ನೌಶಾದ್ ತಾರಿಗುಡ್ಡೆ(32), ಆದಂ ಕೋಲ್ಪೆ(45), ಮುಹಮ್ಮದ್ ಸುಹೈಲ್ ಬಿ. ಭಕ್ತಕೋಡಿ(28), ಅಬ್ದುಲ್ ಖಾದರ್ ಜಾಬಿರ್ ಬನ್ನೂರು(30), ಅಬ್ದುಲ್ ಕರೀಂ ಒಳಮೊಗ್ರು ಕುಂಬ್ರ(39), ಯಾಕೂಬ್ ಅಂಗಡಿಮಜಲು(47), ಇಮ್ರಾನ್ ಅಹ್ಮದ್ ಅಲಂಗುರಡ್ಕ(40), ಮುಹಮ್ಮದ್ ರಿಫಾಝ್ ಕೂರ್ನಡ್ಕ(22), ಮುಹಮ್ಮದ್ ಇರ್ಷಾದ್ ಜೆ. ಜಾರತ್ತಾರ್(40) ಎಂಬವರು ನಿರೀಕ್ಷಣಾ ಜಾಮೀನು ಕೋರಿ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯಕ್ ಅವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಆರೋಪಿಗಳ ಪರ ವಕೀಲ ಅಬ್ದುಲ್ ರಹಿಮಾನ್ ಹಿರೇಬಂಡಾಡಿ ವಾದಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!