September 10, 2026

ಮಂಗಳೂರು: 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

0
image_editor_output_image1543198800-1789024661121

ಮಂಗಳೂರು: ಕಳೆದ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳವು ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಮಂಗಳೂರಿನ ಕಾವೂರು ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರಿನ ಆಕಾಶಭವನದ ಆನಂದ ನಗರ ನಿವಾಸಿ, ದಿವಂಗತ ಲಾಸ್ರದೋ ಮಾರಿಯಾ ಅವರ ಪತ್ನಿ ಲತಾ ಮಾರಿಯಾ (44) ಬಂಧಿತ ಆರೋಪಿ.

ಬಂಧಿತ ಲತಾ ಮಾರಿಯಾ ವಿರುದ್ಧ 2019 ರಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧ ಕ್ರಮಾಂಕ 33/2019, ಭಾರತೀಯ ದಂಡ ಸಂಹಿತೆ (IPC) ಕಲಂ 381 ರಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಾನ್ಯ ಹಿರಿಯ ಸಿಜೆ & ಸಿ.ಜೆ.ಎಮ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿತ್ತು. ಆದರೆ ಆರೋಪಿ ಲತಾ ಮಾರಿಯಾ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದಳು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿಯ ವಿರುದ್ಧ ದಸ್ತಗಿರಿ ವಾರಂಟ್ (LPC No 05/2024) ಹೊರಡಿಸಿತ್ತು.

Leave a Reply

Your email address will not be published. Required fields are marked *

error: Content is protected !!