September 11, 2026

ಪುತ್ತೂರು: ಬೈಪಾಸ್ ರಸ್ತೆಯಲ್ಲಿ ಕಾಡುಕೋಣ ಪ್ರತ್ಯಕ್ಷ

0
image_editor_output_image1967557997-1789101596823

ಪುತ್ತೂರು: ಇದುವರೆಗೆ ಗ್ರಾಮೀಣ ಪ್ರದೇಶಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಕಾಡುಕೋಣಗಳು ಇದೀಗ ಪುತ್ತೂರು ಪೇಟೆ ಪ್ರದೇಶದತ್ತಲೂ ಆಗಮಿಸುತ್ತಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಪುತ್ತೂರು ಬೈಪಾಸ್ ರಸ್ತೆಯ ದುಗ್ಗಮ್ಮ–ದೇರಣ್ಣ ಹಾಲ್ ಸಮೀಪ ಸೆ.11ರ ನಸುಕಿನ ಜಾವ ಎರಡು ಕಾಡುಕೋಣಗಳು ರಸ್ತೆಯಲ್ಲೇ ಕಾಣಿಸಿಕೊಂಡಿವೆ. ನಸುಕಿನ ವೇಳೆ ರಸ್ತೆಯಲ್ಲಿ ಕಾಡುಕೋಣಗಳು ನಿಂತಿರುವುದನ್ನು ಗಮನಿಸಿದ ಸಾರ್ವಜನಿಕರು ಹಾಗೂ ವಾಹನ ಸವಾರರು ಕೆಲಕಾಲ ಆತಂಕಕ್ಕೊಳಗಾದರು.

Leave a Reply

Your email address will not be published. Required fields are marked *

error: Content is protected !!