ಮಲ್ಪೆ: ಬೋಟಿನಲ್ಲಿ ಮೀನುಗಾರಿಕೆಗೆ ಬಿಟ್ಟ ಬಲೆಯನ್ನು ಎಳೆಯುತ್ತಿದ್ದ ವೇಳೆ ಕಾಲು ಜಾರಿ ಸಮುದ್ದಕ್ಕೆ ಬಿದ್ದು ಮೀನುಗಾರ ಮೃತ್ಯು
ಮಲ್ಪೆ: ಬೋಟಿನಲ್ಲಿ ಮೀನುಗಾರಿಕೆಗೆ ಬಿಟ್ಟ ಬಲೆಯನ್ನು ಎಳೆಯುತ್ತಿದ್ದ ಮೀನುಗಾರರೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಸಮುದ್ದದ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೊಪ್ಪಳ ಜಿಲ್ಲೆಯ ಅಶೋಕ(42) ಎಂದು ಗುರುತಿಸಲಾಗಿದೆ.
ಇವರು ಸೆ.8ರಂದು ಬೋಟಿನಲ್ಲಿ ಮೀನುಗಾರಿಕೆ ಕೆಲಸ ತೆರಳಿದ್ದು, ಸಮುದ್ರದ ಮಧ್ಯೆ ಬಲೆ ಎಳೆಯುತ್ತಿದ್ದಾಗ ಅಕಸ್ಮಿಕವಾಗಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಸೆ.11 ರಂದು ಬೆಳಗ್ಗೆ ಇವರ ಮೃತದೇದ ಪತ್ತೆಯಾಗಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





