SSLC ವಿದ್ಯಾರ್ಥಿನಿ ನೇಣಿಗೆ ಶರಣು
ತುಮಕೂರು: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಚ್ಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮನ್ವಿತಾ (16) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.





