September 16, 2026

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದು ಹಿಂತಿರುಗುತ್ತಿದ್ದ ವೇಳೆ ಕಾರು ಪಲ್ಟಿ: ಕೋಲಾರ ಮೂಲದ ಮೂವರಿಗೆ ಗಾಯ

0
image_editor_output_image-76576547-1789467828293

ಬೆಳ್ತಂಗಡಿ: ಕೋಲಾರ ಜಿಲ್ಲೆಯ ನಾಲ್ವರು ಕುಟುಂಬ ಸದಸ್ಯರು ಧರ್ಮಸ್ಥಳ ದೇವಸ್ಥಾನಕ್ಕೆ ತೆರಳಿ ಬಳಿಕ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನಘಟ್ಟದ ಬಳಿ ನಡೆದಿದೆ.

ನೇತ್ರಾವತಿ ಸ್ನಾನಘಟ್ಟದ ಬಳಿಯ ಸರ್ವಿಸ್‌ ಸ್ಟೇಷನ್‌ ಪಕ್ಕದ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿಗೆ ಉರುಳಿ ಪಲ್ಟಿಯಾಗಿದೆ. ಅಪಘಾತದಲ್ಲಿ ಕಾರು ಚಾಲಕ ಶಶಿಕುಮಾರ್ ಸೇರಿದಂತೆ ಮೂವರಿಗೆ ಕೈ ಹಾಗೂ ಕಾಲಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಯ ಮಾಹಿತಿ ತಿಳಿದು ಬೆಳ್ತಂಗಡಿ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬರಬೇಕಿದೆ.

Leave a Reply

Your email address will not be published. Required fields are marked *

You may have missed

error: Content is protected !!