February 3, 2026

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಗೆ ನಾವೆಲ್ಲ ಸಿದ್ಧರಾಗಬೇಕಿದೆ: ಸಿ.ಎಂ ಬಸವರಾಜ್ ಬೊಮ್ಮಾಯಿ

0
bommai.jpg

ಬೆಂಗಳೂರು: ಕೋವಿಡ್ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ, ಇದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಿನ್ನೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಧಿಕಾರಿಗಳ ಜೊತೆ ಚರ್ಚಿಸಿ ನಂತರ ಮಾತನಾಡಿದ ಅವರು ಕೋವಿಡ್ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ, ಇದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು, ಇದರ ಜೊತೆಗೆ ಆರ್ಥಿಕತೆಯೂ ಮುನ್ನಡೆಯಬೇಕಾಗಿದೆ.

ಕೇವಲ ನಿರ್ಬಂಧಗಳನ್ನು ಜಾರಿಗೊಳಿಸಿ ಸುಮ್ಮನಿರಲಾಗದು. ನಾವು ಈ ಸವಾಲನ್ನು ವಿಭಿನ್ನ ಕಾರ್ಯತಂತ್ರದಿಂದ ಎದುರಿಸಬೇಕು ಎಂದರು, ನಿಮ್ಮ ಇಲಾಖೆಯಲ್ಲಿ ಅನವಶ್ಯಕ ವೆಚ್ಚ ಕಡಿತಗೊಳಿಸಿ. ತೆರಿಗೆ ಸಂಗ್ರಹ ಇಲಾಖೆಗಳು ಇನ್ನಷ್ಟು ದಕ್ಷತೆಯಿಂದ ಕಾರ್ಯನಿರ್ವಹಿಸಿ ರಾಜ್ಯದ ಆರ್ಥಿಕತೆಯನ್ನು ಉತ್ತಮ ಪಡಿಸಬೇಕು. ಕೋವಿಡ್ ಸಂಭಾವ್ಯ ಮೂರನೇ ಅಲೆಗೆ ನಾವು ಸಿದ್ಧರಾಗಬೇಕಾಗಿದೆ, ಇದಕ್ಕಾಗಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು.

Leave a Reply

Your email address will not be published. Required fields are marked *

error: Content is protected !!