September 16, 2026

ಬಂಟ್ವಾಳ: 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image-1975425140-1789535600387

ಬಂಟ್ವಾಳ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಮಂಗಳೂರು ಬಜಾಲ್–ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯ ಅ.ಕ್ರ. 24/2020ರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ವಾರೆಂಟ್ ಜಾರಿಯಾಗಿತ್ತು.

ಸೆ.15ರಂದು ವಿದೇಶದಿಂದ ಮನೆಗೆ ಹಿಂದಿರುಗುತ್ತಿದ್ದ ವೇಳೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆ.29ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

You may have missed

error: Content is protected !!