ಸೆ.17ರಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನ: ಜೆ.ಪಿ.ನಡ್ಡಾ
ಬೆಂಗಳೂರು: ಪ್ರಧಾನಿ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸೇವಾ ಪಾಕ್ಷಿಕವನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಈ ಬಾರಿ ಸೆ.17ರಿಂದ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನವನ್ನು ನಡೆಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹೇಳಿದ್ದಾರೆ.
ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಆಡಳಿತ ಕ್ಷೇತ್ರದಲ್ಲಿ ಜನಪರ ಸೇವೆಯನ್ನು ಗಮನಿಸಿ ಪಕ್ಷವು ಈ ಬಾರಿ ಒಂದು ತಿಂಗಳ ಕಾಲ ಸೇವಾ ಸಂಕಲ್ಪ ಅಭಿಯಾನವನ್ನು ನಡೆಸಲಿದೆ. ಮೋದಿಯವರು 140 ಕೋಟಿ ಜನರ ಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. 2047ರ ವೇಳೆಗೆ ವಿಕಸಿತ ಅಭಿವೃದ್ಧಿಶೀಲ ಭಾರತ ನಿರ್ಮಾಣಕ್ಕೆ ಅವರು ಸಂಕಲ್ಪ ಮಾಡಿದ್ದಾರೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಶಾಸಕ ಡಾ.ಅಶ್ವಥನಾರಾಯಣ್, ಸಂಸದರಾದ ಪಿ.ಸಿ.ಮೋಹನ್, ಡಾ.ಮಂಜುನಾಥ್, ಪರಿಷತ್ ಸದಸ್ಯ ಸಿ.ಟಿ.ರವಿ, ಅಭಿಯಾನದ ಸಂಚಾಲಕ ಎನ್.ಎಸ್.ನಂದೀಶ್ ರೆಡ್ಡಿ ಸೇರಿದಂತೆ ಮತ್ತಿತರರು ಹಾಜರಿದ್ದರು.





