ಹಿಟ್ & ರನ್: ನವದಂಪತಿ ಸಾವು
ತುಮಕೂರು: ಹಿಟ್ & ರನ್‌ಗೆ ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ.
ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದಂಪತಿ ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ಮಂಗಳವಾರ ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.





