September 17, 2026

ಗ್ರಾಮ ಪಂಚಾಯಿತಿಯಲ್ಲೇ ತಂದೆ, ಮಗಳ ಬರ್ಬರ ಹತ್ಯೆ

0
image_editor_output_image-1934076916-1789623980989

ಬೆಳಗಾವಿ: ಆಸ್ತಿ ದಾಖಲೆ ಪಡೆಯಲು ಗ್ರಾಮ ಪಂಚಾಯಿತಿಗೆ ಬಂದಿದ್ದ ತಂದೆ-ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ನಡೆದಿದೆ.

ಮಾಜಿ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಹತ್ಯೆಯಾದ ದುರ್ದೈವಿ. ಘಟನೆಯಲ್ಲಿ ರುದ್ರಪ್ಪ ಅವರ ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ರುದ್ರಪ್ಪ ಹಾಗೂ ಅವರ ಅಣ್ಣತಮ್ಮಂದಿರ ನಡುವೆ ವ್ಯಾಜ್ಯವಿತ್ತು ಎನ್ನಲಾಗಿದೆ. ಆಸ್ತಿ ಪಾಲುದಾರಿಕೆಗೆ ಅರ್ಜಿ ಸಲ್ಲಿಸಲು ರುದ್ರಪ್ಪ ಗ್ರಾಮ ಪಂಚಾಯಿತಿಗೆ ಬಂದಿದ್ದ ವೇಳೆ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ.

Leave a Reply

Your email address will not be published. Required fields are marked *

error: Content is protected !!