September 17, 2026

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಉಸಿರುಗಟ್ಟಿಸಿ ಕೊಂದ ಪತಿ

0
image_editor_output_image-1933153395-1789624205791

ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ  ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ  ನಗರದ ಲಾಡ್ಜ್‌ನಲ್ಲಿ ನಡೆದಿದೆ.

ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಮೃತ ಮಹಿಳೆ. ಆಕೆಯ ಪತಿ ಆನಂದ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಐಡಿ ಕಾರ್ಡ್‌ನ ಟ್ಯಾಗ್‌ನಿಂದ ಕತ್ತು ಬಿಗಿದು ಉಸಿರುಗಟ್ಟಿಸಿ ವಿದ್ಯಾಳನ್ನು ಕೊಲೆ ಮಾಡಲಾಗಿದೆ. ಬಳಿಕ ಆಕೆಯ ಮೊಬೈಲ್ ತೆಗೆದುಕೊಂಡು ಆನಂದ್ ಲಾಡ್ಜ್‌ನಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!