September 17, 2026

ಕೊಣಾಜೆ: ಪನೀರು ಚರ್ಚ್ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾದ ಸ್ವಿಫ್ಟ್ ಕಾರು

0
image_editor_output_image-1874048051-1789655369966

ಕೊಣಾಜೆ: : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾಗಿ ರಸ್ತೆ ಬದಿಯ ಟ್ರಾನ್ಸ್‌ಫಾರ್ಮರ್ ಕಂಬಕ್ಕೆ ಒರಗಿ ನಿಂತ ಭೀಕರ ಘಟನೆ ಗುರುವಾರ ಬೆಳಿಗ್ಗೆ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ಸಂಭವಿಸಿದೆ. ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೊಬ್ಬರು ಈ ಅಪಘಾತದಿಂದ ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಸದರಿ ವಿದ್ಯಾರ್ಥಿಯು ತಮ್ಮ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದೇರಳಕಟ್ಟೆಯಿಂದ ಪನೀರ್ ರಸ್ತೆಯ ಮಾರ್ಗವಾಗಿ ಬೀರಿ ಕಡೆಗೆ ಸಂಚರಿಸುತ್ತಿದ್ದರು. ಈ ವೇಳೆ ಪನೀರು ಚರ್ಚ್ ಸಮೀಪವಿರುವ ಅಪಾಯಕಾರಿ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ದಿಢೀರ್ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ ಕಂಬಕ್ಕೆ ಒರಗಿ ನಿಂತಿದೆ. ಘಟನೆಯ ರಭಸಕ್ಕೆ ಕಾರಿಗೆ ಹಾನಿಯಾಗಿದೆಯಾದರೂ, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಭಾರಿ ದುರಂತವೊಂದು ತಪ್ಪಿದಂತಾಗಿದೆ.

ಘಟನಾ ಸ್ಥಳಕ್ಕೆ ಮೆಸ್ಕಾಂ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯುತ್ ಅವಘಡ ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!