ಅಡಿಕೆ ಬೇಯಿಸುವಾಗ ಹಂಡೆಯೊಳಗೆ ಬಿದ್ದು ವ್ಯಕ್ತಿ ಸಾವು
ಶಿವಮೊಗ್ಗ: ಅಡಿಕೆ ಬೇಯಿಸುವಾಗ ಹಂಡೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಡ್ಡಿನಕೊಪ್ಪದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಜೇನು ಕುಮಾರ್ ಮೃತ ದುರ್ದೈವಿ. ಸೆ.8 ರಂದು ಜೇನು ಕುಮಾರ್ ತಮ್ಮ ಮನೆ ಬಳಿ ಶೆಡ್‌ನಲ್ಲಿ ಅಡಿಕೆ ಬೇಯಿಸುತ್ತಿದ್ದರು. ಬಳಿಕ ಅಡಿಕೆ ಹೊರತೆಗೆದು, ಹಂಡೆಯಲ್ಲಿದ್ದ ಅಡಿಕೆ ಚೊಗರು ತೆಗೆಯಲು ಪಕ್ಕದಲ್ಲಿದ್ದ ಕಟ್ಟೆ ಏರಿದ್ದರು. ಈ ವೇಳೆ ಕಾಲು ಜಾರಿ ಹಂಡೆಯೊಳಗೆ ಬಿದ್ದಿದ್ದರು.






