ಫ್ಲೈಓವರ್‌ನಿಂದ ಕಾರು ಪಲ್ಟಿ: ಚಾಲಕ ಸಾವು
ಮಂಡ್ಯ: ನಿಯಂತ್ರಣ ತಪ್ಪಿದ ಕಾರೊಂದು ಫ್ಲೈಓವರ್‌ನಿಂದ ಪಲ್ಟಿ ಹೊಡೆದು ಕೆಳಕ್ಕೆ ಬಿದ್ದ ಘಟನೆ ಮಂಡ್ಯದ ಬಳಿಯ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ನಡೆದಿದೆ.
ವೇಗವಾಗಿ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉಮ್ಮಡಹಳ್ಳಿ ಗೇಟ್ ಸಮೀಪ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಎಕ್ಸ್‌ಪ್ರೆಸ್‌ವೇ ಫ್ಲೈ ಓವರ್‌ನಿಂದ ಹಾರಿದ ಕಾರು ಅಂಡರ್ ಪಾಸ್‌ಗೆ ಬಿದ್ದಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಮಹಿಳೆ ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾರೆ.




