ತುಳು ಭಾಷೆಗೆ ರಾಜ್ಯದ 2ನೇ ಅಧಿಕೃತ ಭಾಷೆ ಮಾನ್ಯತೆ: ಮುಖ್ಯಮಂತ್ರಿ ಮತ್ತು ಸಚಿವರಿಗೆ ಅಭಿನಂದನೆ ಸಲ್ಲಿಸಿದ ಒಡಿಯೂರು ಶ್ರೀ
ಇಂದು ತುಳುನಾಡಿನ ಕೇಂದ್ರ ಸ್ಥಳವಾದ ಮಂಗಳೂರಿನಲ್ಲಿ ಜರಗಿದ ಕರ್ನಾಟಕ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ತುಳುಭಾಷೆಗೆ ಕರ್ನಾಟಕದ 2ನೇ ಅಧಿಕೃತ ಭಾಷೆಯ ಮಾನ್ಯತೆಯನ್ನು ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರು ಘೋಷಿಸಿರುವುದು ಸಂತಸದ ವಿಚಾರ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ತಿಳಿಸಿದ್ದಾರೆ.
ಎರಡೂವರೆ ಸಾವಿರ ವರ್ಷದ ಇತಿಹಾಸದ ತುಳುಭಾಷೆಗೆ ಮಾನ್ಯತೆ ದೊರೆತಿರುವುದು ತುಳುವರ ಹಲವು ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ವಿಜಯ. ಇದರಿಂದಾಗಿ ತುಳುಭಾಷೆ ಸಂವಿಧಾನದ 8ನೇ ಪರಿಚ್ಛೆದಕ್ಕೆ ಸೇರ್ಪಡೆಗೆ ರಹದಾರಿಯಾಗಿದೆ. ಅದಲ್ಲದೆ ಕರಾವಳಿಯ ಅಭಿವೃದ್ಧಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ಎಲ್ಲಾ ಸಚಿವರುಗಳಿಗೆ, ಶಾಸಕರುಗಳಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.





