September 19, 2026

ಬಂಟ್ವಾಳ: ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಮನೆಗೆ ಮುಖ್ಯಮಂತ್ರಿ ಡಿಕೆಶಿ ಭೇಟಿ-ಆರೋಗ್ಯ ವಿಚಾರಣೆ

0
image_editor_output_image-832526584-1789750272714

ಬಂಟ್ವಾಳ: ಕೇಂದ್ರ ಮಾಜಿ ಸಚಿವ, ಹಿರಿಯ ಕಾಂಗ್ರೆಸಿಗ ಬಿ.ಜನಾರ್ದನ ಪೂಜಾರಿ ನಿವಾಸಕ್ಕೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಶುಕ್ರವಾರ ರಾತ್ರಿ ಭೇಟಿ ನೀಡಿ, ಆರೋಗ್ಯ ವಿಚಾರಿಸಿ, ಆಶೀರ್ವಾದ ಪಡೆದರು. ಕಳೆದ ಫೆಬ್ರವರಿಯಲ್ಲಿ ಉಪಮುಖ್ಯಮಂತ್ರಿ ಆಗಿದ್ದ ವೇಳೆಯೂ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದ ವೇಳೆ ಜನಾರ್ದನ ಪೂಜಾರಿ ಅವರು ಉತ್ತಮ ಕೆಲಸ ಮಾಡಿ ನಾಡಿಗೆ ಕೀರ್ತಿ ತರುವಂತೆ ಹಾರೈಸಿದ್ದರು.

ಈ ಸಂದರ್ಭ ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ, ಡಿಸಿಸಿ ಅಧ್ಯಕ್ಷ ಆರ್.ಪದ್ಮರಾಜ್, ಪಕ್ಷ ಪ್ರಮುಖರಾದ ಮಿಥುನ್ ರೈ, ಇನಾಯತ್ ಆಲಿ, ಪಿಯುಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್ ಸಹಿತ ಹಲವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!