September 19, 2026

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪತಿಯ ಮೃತ ದೇಹ ಕೆರೆಯಲ್ಲಿ ಪತ್ತೆ

0
image_editor_output_image-1703617108-1789794139218

ಚಿಕ್ಕಬಳ್ಳಾಪುರ: ಲಾಡ್ಜ್‌ನಲ್ಲಿ  ಹೆಂಡತಿಯನ್ನು ಕೊಲೆ ಮಾಡಿ ಪರಾರಿಯಾಗಿದ್ದ ಗಂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮದುಗೆರೆ ಗ್ರಾಮದಲ್ಲಿ ನಡೆದಿದೆ.

ದೊಡ್ಡಬಳ್ಳಾಪುರದಲ್ಲಿ ಪತ್ನಿ ವಿದ್ಯಾಳನ್ನು ಕೊಲೆ ಮಾಡಿದ್ದ ಆನಂದ್, ಗೌರಿಬಿದನೂರು ತಾಲೂಕಿನ ಸ್ವಗ್ರಾಮ ಮದುಗೆರೆ ಗ್ರಾಮದ ಕೆರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟಂಬರ್ 15ರಂದು ದೊಡ್ಡಬಳ್ಳಾಪುರದ ಲಾಡ್ಜ್‌ನಲ್ಲಿ 23 ವರ್ಷದ ವಿದ್ಯಾಳನ್ನು ಐಡಿ ಕಾರ್ಡ್ ಟ್ಯಾಗ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದ ಆನಂದ್ ಬಳಿಕ ಪರಾರಿಯಾಗಿದ್ದ.

ಸೆಪ್ಟೆಂಬರ್ 16ರಂದು ಪ್ರಕರಣ ಬೆಳಕಿಗೆ ಬಂದಿತ್ತು. ಪರಾರಿಯಾಗಿದ್ದ ಆನಂದ್ ಇದೀಗ ಸ್ವಗ್ರಾಮ ಮದುಗೆರೆ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!