September 19, 2026

ಕೊಳತ್ತಮಜಲು: ರಹಿಮಾನ್ ಕೊಲೆ ಪ್ರಕರಣದ ಆರೋಪಿ ಭರತ್ ಕುಮ್ಡೇಲು ಸಹಿತ  ಆರು ಮಂದಿ ಆರೋಪಿಗಳ ಮೇಲೆ ಗೂಂಡಾ ಕಾಯ್ದೆ

0
image_editor_output_image-662958947-1789827727541

ಮಂಗಳೂರು: ಕೊಳತ್ತಮಜಲು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಕೋಕಾ ಕಾಯ್ದೆ ಅಳವಡಿಸಲಾಗಿದ್ದು, ಈ ಪೈಕಿ ಆರು ಮಂದಿಯ ವಿರುದ್ಧ ಗೂಂಡಾ ಕಾಯ್ದೆ ಅಳವಡಿಸಲಾಗಿದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಆರೋಪಿಗಳಾದ ಭರತ್ ಕುಮ್ಡೇಲು (38), ಶಿವಪ್ರಸಾದ್ (33), ಪ್ರದೀಪ್ (34), ಅಭಿನ್ ರೈ (32), ತೇಜಾಕ್ಷ (24) ಮತ್ತು ರಂಜಿತ್ (35) ಎಂಬವರ ವಿರುದ್ಧ ಕಾನೂನು ಬದ್ಧವಾಗಿ ಗೂಂಡಾ ಕಾಯ್ದೆ ಅಳವಡಿಸಲಾಗಿರುತ್ತದೆ ಎಂದು ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!