September 21, 2026

ಕರಾವಳಿ ಭಾಗದ ವಿವಿಧೆಡೆ ಉತ್ತಮ ಮಳೆ: 5 ದಿನ ಭಾರಿ ಮಳೆ ಸಾಧ್ಯತೆ

0
image_editor_output_image-1330233949-1789966519246

ಮಂಗಳೂರು: ಕಳೆದ ಕೆಲವು ದಿನಗಳಿಂದ ತೀವ್ರ ಬೇಸಿಗೆಯಂತಹ ಬಿಸಿಲಿನ ಝಳಕ್ಕೆ ಬೆಂದಿದ್ದ ಮಂಗಳೂರು ಹಾಗೂ ಕರಾವಳಿ ಜನತೆಗೆ ಮಳೆರಾಯ ಕೊಂಚ ನೆಮ್ಮದಿ ನೀಡಿದ್ದಾನೆ. ಸೋಮವಾರ ಮುಂಜಾನೆಯಿಂದಲೇ ಮೋಡಕವಿದ ವಾತಾವರಣವಿದ್ದು, ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಗರದ ವಿವಿಧೆಡೆ ಉತ್ತಮ ಮಳೆಯಾಗಿದೆ.

ಈ ಬಾರಿಯ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ಕೈಕೊಟ್ಟಿದ್ದರಿಂದ ಕರಾವಳಿ ಭಾಗದಲ್ಲಿ ಮಳೆಗಾಲದಲ್ಲೇ ಕೊತಕೊತ ಕುದಿಯುವ ಬಿಸಿಲಿನ ವಾತಾವರಣ ನಿರ್ಮಾಣವಾಗಿತ್ತು. ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರು ತೀವ್ರ ಕಂಗೆಟ್ಟಿದ್ದರು. ಸೋಮವಾರ ಸುರಿದ ಮಳೆಯು ವಾತಾವರಣವನ್ನು ತಂಪಾಗಿಸಿದೆ.

 

5 ದಿನ ಭಾರಿ ಮಳೆ ಸಾಧ್ಯತೆ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ( ಪರಿಣಾಮದಿಂದಾಗಿ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳು (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ), ಮಲೆನಾಡು ಭಾಗಗಳು ಹಾಗೂ ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

Leave a Reply

Your email address will not be published. Required fields are marked *

error: Content is protected !!