September 21, 2026

ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

0
image_editor_output_image1289296975-1789969434856

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಂಗಶಾಮಣ್ಣ (60) ಮೃತ ದುರ್ದೈವಿ. ರಂಗಶಾಮಣ್ಣ ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ತಂತಿ ಕಟ್ ಆಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸದೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ರಂಗಶಾಮಣ್ಣ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!