September 21, 2026

ಶಿವಮೊಗ್ಗ:ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕ ಸಾವು

0
image_editor_output_image-273623818-1789975420342

ಶಿವಮೊಗ್ಗ: ಜಿಲ್ಲಾಡಳಿತದ ಎಚ್ಚರಿಕೆ ಮತ್ತು ಮಾರ್ಗಸೂಚಿಗಳ ನಡುವೆಯೂ ಗಣೇಶ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಜಿಲ್ಲೆಯ ಭದ್ರಾವತಿ ತಾಲೂಕಿನ ದೇವರಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದ್ದು, ಮೃತ ಯುವಕನನ್ನ ರಾಕೇಶ್ (20) ಎಂದು ಗುರುತಿಸಲಾಗಿದೆ. ಭದ್ರಾವತಿಯಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ರಾಕೇಶ್, ಭದ್ರಾವತಿ ತಾಲೂಕಿನ ರಂಗನಾಥಪುರದಲ್ಲಿ ಪ್ರತಿಷ್ಠಾಪಿಸಿದ್ದ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದ. ಭಾನುವಾರ ಸಂಜೆ ಆರಂಭಗೊಂಡಿದ್ದ ಗಣೇಶ ವಿಸರ್ಜನಾ ಮೆರವಣಿಗೆ ತಡರಾತ್ರಿ ಸುಮಾರು 1 ಗಂಟೆ ವೇಳೆಗೆ ದೇವರಹಳ್ಳಿ ಕೆರೆ ಬಳಿ ತಲುಪಿತ್ತು. ಈ ಗಣೇಶ ವಿಸರ್ಜನೆ ವೇಳೆ ಆಯತಪ್ಪಿ ರಾಕೇಶ್ ನೀರಿನಲ್ಲಿ ಮುಳುಗಿ ಕಣ್ಮರೆಯಾಗಿದ್ದ. ತಕ್ಷಣವೇ ಶೋಧ ಕಾರ್ಯ ಆರಂಭಿಸಿದ್ದ ಸ್ಥಳೀಯರು ಅಗ್ನಿಶಾಮಕ ದಳ ಹಾಗೂ ಪೊಲೀಸರಿಗೆ ಮಾಹಿತಿ ನೀಡಿದ್ದರು.

 

Leave a Reply

Your email address will not be published. Required fields are marked *

error: Content is protected !!