ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣ: ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ
ಬೆಳ್ತಂಗಡಿ: ಧರ್ಮಸ್ಥಳದ ಸೌಜನ್ಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದ್ದು ವಿಶೇಷ ತನಿಖಾ ತಂಡ ರಚಿಸಿ ಮೂರು ತಿಂಗಳೊಳಗೆ ತನಿಖಾ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿರುವುದಾಗಿ ತಿಳಿದು ಬಂದಿದೆ.
ಪ್ರಕರಣ ನಡೆದು 14 ವರ್ಷಗಳ ಬಳಿಕ ಮರು ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವುದು ಮಹತ್ವದ ಬೆಳವಣಿಗೆಯಾಗಿದೆ.
2012ರ ಅಕ್ಟೋಬರ್ 9ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಸೌಜನ್ಯಾಳನ್ನು ಅತ್ಯಾಚಾರಗೈದು ಕೊಲೆ ಮಾಡಲಾಗಿದೆ. ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಸ್ಥಳೀಯ ಪೊಲೀಸರು ನಡೆಸಿದ್ದು, ಬಳಿಕ ಸಿಐಡಿ ಹಾಗೂ ಸಿಬಿಐಗೆ ವಹಿಸಲಾಗಿತ್ತು. ಸಿಬಿಐ ತನಿಖೆಯ ಬಳಿಕ ಸಂತೋಷ್ ರಾವ್ ಎಂಬಾತನನ್ನು ಆರೋಪಿಯನ್ನಾಗಿ ಮಾಡಲಾಗಿತ್ತು. ಆದರೆ, 2023ರ ಜೂನ್ 16ರಂದು ಸಿಬಿಐ ವಿಶೇಷ ನ್ಯಾಯಾಲಯವು ಸಂತೋಷ್ ರಾವ್ ನರನ್ನು ಖುಲಾಸೆಗೊಳಿಸಿತ್ತು.





