ತುಳು ಭಾಷೆಗೆ ರಾಜ್ಯದ 2 ನೇ ಅಧಿಕೃತ ಭಾಷೆಯ ಸ್ಥಾನಮಾನ: ಕ್ರೆಡಿಟ್ ಪೋಸ್ಟ್ ಹಾಕಿದ್ದ ಬಿಜೆಪಿ ಶಾಸಕರ ಕಾಳೆಲೆದ ನೆಟ್ಟಿಗರು!
ಮಂಗಳೂರು: ತುಳು ಭಾಷೆಗೆ ರಾಜ್ಯದ 2 ನೇ ಅಧಿಕೃತ ಭಾಷೆಯ ಸ್ಥಾನಮಾನ ದೊರಕಿದ್ದು, ಇದರ ಕ್ರೇಡಿಟ್ ಪಡೆಯಲು ಯತ್ನಿಸಿರುವ ಬಿಜೆಪಿ ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.
ನಮ್ಮ ತುಳು ಭಾಷೆಗೆ ರಾಜ್ಯದ 2 ನೇ ಅಧಿಕೃತ ಭಾಷೆಯ ಸ್ಥಾನಮಾನ ದೊರಕಿದ್ದು ಸಂಭ್ರಮದ ವಿಚಾರ. ಈ ಗೆಲುವಿನ ದಿನಕ್ಕಾಗಿ ನಿರಂತರವಾಗಿ ಶ್ರಮಿಸಿದ ತುಳುಪರ ಸಂಘಟನೆಗಳಿಗೆ ಹಾಗೂ ತುಳುಪರ ಹೋರಾಟಗಾರರಿಗೆ ಅಭಿನಂದನೆಗಳು.
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಅಂದಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಶ್ರೀ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ, ಶ್ರೀ ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ರಚನೆಗೊಂಡ ಸಮಿತಿಯ ವರದಿಯನ್ನು ಅಂಗೀಕರಿಸಿ ತುಳು ಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿದ ರಾಜ್ಯದ ಸಿಎಂ ಡಿಕೆ ಶಿವಕುಮಾರ್ ಅವರಿಗೆ ಧನ್ಯವಾದಗಳು ಎಂದು ಶಾಸಕ ಭರತ್ ಶೆಟ್ಟಿ ಫೇಸ್ಬುಕ್ ಪೋಸ್ಟ್ ಹಾಕಿದ್ದರು.
ಪೋಸ್ಟ್ ವಿರುದ್ಧಡ್ ಕಾಮೆಂಟ್ ಗಳು ಇಲ್ಲಿವೆ…








