September 22, 2026

ಸೌಜನ್ಯಾ ಪ್ರಕರಣದ ಮರುತನಿಖೆಗೆ ಸುಪ್ರೀಂ ಆದೇಶ: ‘ಮುಕ್ತ ಮನಸ್ಸಿನಿಂದ ಸ್ವಾಗತಿಸುತ್ತೇವೆ’ ಎಂದ ಶ್ರೀ ಕ್ಷೇತ್ರ ಧರ್ಮಸ್ಥಳ ಆಡಳಿತ ಮಂಡಳಿ

0
image_editor_output_image1393444627-1790050200836

ಧರ್ಮಸ್ಥಳ: ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದ ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಸುಪ್ರೀಂ ಕೋರ್ಟ್‌ ಮರು ತನಿಖೆಗೆ ಒಪ್ಪಿಸಿರುವ ನಿರ್ಧಾರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಾಗತಿಸಿದೆ.

ಧರ್ಮಸ್ಥಳ ಕ್ಷೇತ್ರದ ಪರವಾಗಿ ಹೇಳಿಕೆ ಬಿಡುಗಡೆ ಮಾಡಿರುವ ಧರ್ಮಸ್ಥಳ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಮರು ತನಿಖೆಯಿಂದ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗಲಿ ಅಂತ ಆಶಿಸಿದ್ದಾರೆ.
ದೇವಾಲಯದ ಆಡಳಿತ ಮಂಡಳಿ ಹೇಳಿಕೆ: ಧರ್ಮಸ್ಥಳ ದೇವಾಲಯ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ್ ಜೈನ್ ಅವರು ಕ್ಷೇತ್ರದ ಪರವಾಗಿ ಈ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕಳೆದ ಹಲವು ವರ್ಷಗಳಿಂದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವ್ಯವಸ್ಥಿತವಾಗಿ ಅಪಪ್ರಚಾರ ನಡೆಸಿ, ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಪ್ರಯತ್ನಿಸುತ್ತಿರುವುದಾಗಿ ಆಡಳಿತ ಮಂಡಳಿ ವಿಷಾದ ವ್ಯಕ್ತಪಡಿಸಿದೆ.

ಸೌಜನ್ಯಳಿಗೆ ನ್ಯಾಯ ಸಿಗಬೇಕು ಎಂಬುದು ಕ್ಷೇತ್ರದ ದೃಢ ಆಶಯವಾಗಿದ್ದು, ಮರು ತನಿಖೆಯು ನಿಷ್ಪಕ್ಷಪಾತ ಹಾಗೂ ಪಾರದರ್ಶಕವಾಗಿ ನಡೆದು ಪ್ರಕರಣಕ್ಕೆ ಸೂಕ್ತ ತಾರ್ಕಿಕ ಅಂತ್ಯ ಸಿಗಲಿ ಎಂದು ಹಾರೈಸಿದೆ.

 

Leave a Reply

Your email address will not be published. Required fields are marked *

You may have missed

error: Content is protected !!