September 23, 2026

ಮೂಡುಬಿದಿರೆ: ಬಿಜೆಪಿಯ ಯುವ ಮುಖಂಡ ಪ್ರತೀಕ್ ಶೆಟ್ಟಿ ನಿಧನ

0
image_editor_output_image628573295-1790135230523

ಮೂಡುಬಿದಿರೆ: ಬಿಜೆಪಿಯ ಸಕ್ರಿಯ ಯುವ ಮುಖಂಡ, ಕಿನ್ನಿಗೋಳಿ ನಿವಾಸಿ ಪ್ರತೀಕ್ ಶೆಟ್ಟಿ (40) ಅವರು ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ತಡರಾತ್ರಿ ನಿಧನರಾಗಿದ್ದಾರೆ.

ಮೂಲ್ಕಿ–ಮೂಡುಬಿದಿರೆ ಮಂಡಲ ಯುವಮೋರ್ಚಾದಲ್ಲಿ ತಳಮಟ್ಟದಿಂದ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಪ್ರತೀಕ್ ಶೆಟ್ಟಿ ಅವರು, ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿದ್ದರು.

 

ಮೂಡುಬಿದಿರೆ ಹಾಗೂ ಮೂಲ್ಕಿ ಭಾಗದ ಜಿಲ್ಲಾ ಬಿಜೆಪಿಯಲ್ಲಿ ವಿವಿಧ ಹೊಣೆಗಾರಿಕೆಗಳನ್ನು ನಿಭಾಯಿಸಿದ್ದ ಅವರು, ಕಾರ್ಯಕರ್ತರು ಹಾಗೂ ಸ್ಥಳೀಯ ಸಾರ್ವಜನಿಕರೊಂದಿಗೆ ಅತ್ಯಂತ ಆತ್ಮೀಯ ಒಡನಾಟ ಹೊಂದಿದ್ದರು. ಅವರ ನಿಧನಕ್ಕೆ ಸ್ಥಳೀಯ ಬಿಜೆಪಿ ಮುಖಂಡರು, ಯುವಮೋರ್ಚಾ ಕಾರ್ಯಕರ್ತರು ಹಾಗೂ ಅಭಿಮಾನಿಗಳು ತೀವ್ರ ಕಂಬನಿ ಮಿಡಿದಿದ್ದಾರೆ.

Leave a Reply

Your email address will not be published. Required fields are marked *

error: Content is protected !!