ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ
ಉಡುಪಿ: ದುಬೈನ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಪ್ರಕಾಶ್ ಕುಂದರ್ ಕೊಲೆಯಾದ ದುರ್ದೈವಿ. ಕಳೆದ ಜುಲೈ ತಿಂಗಳಲ್ಲಿ ಈ ಕೊಲೆ ನಡೆದಿದ್ದು, ಎರಡು ತಿಂಗಳ ಬಳಿಕ ಈ ಘಟನೆ ಬೆಳಕಿಗೆ ಬಂದಿದೆ. ಅವರನ್ನು ದುಷ್ಕರ್ಮಿಗಳು ಕೊಲೆಮಾಡಿ, ಶವವನ್ನು 9 ತುಂಡುಗಳನ್ನಾಗಿ ಮಾಡಿ, ಅವರದ್ದೇ ಕಾರಿನ ಡಿಕ್ಕಿಯಲ್ಲಿ ತುಂಬಿದ್ದರು ಎಂದು ತಿಳಿದುಬಂದಿದೆ. ಈ ಕೊಲೆಯಿಂದ ಕುಟುಂಬಸ್ಥರಲ್ಲಿ ಆತಂಕ ಮನೆ ಮಾಡಿದೆ.





