ಕುಂದಾಪುರದ ಯುವಕ ಆತ್ಮಹತ್ಯೆ
ಕುಂದಾಪುರ: ಕೋಟೇಶ್ವರದ ಐತಿಹಾಸಿಕ ಕೋಟಿತೀರ್ಥ ಪುಷ್ಕರಣಿಗೆ (ದೇವಸ್ಥಾನದ ಕೆರೆ) ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಧಾರ್ಮಿಕ ಕ್ಷೇತ್ರದಲ್ಲಿ ಆಘಾತಕಾರಿ ಘಟನೆ ನಡೆದಿದೆ. ಮಂಗಳವಾರ ರಾತ್ರಿ ಸಂಭವಿಸಿದ ಈ ದುರಂತದಲ್ಲಿ, ಬುಧವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ. ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಮೃತಪಟ್ಟ ದುರದೃಷ್ಟಕರ ಯುವಕ.
ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪದ್ಮನಾಭ ಅವರು, ಕಳೆದ ನಾಲ್ಕು ತಿಂಗಳಿನಿಂದ ಯಾವುದೇ ಕೆಲಸಕ್ಕೂ ಹೋಗದೆ ಮನೆಯಲ್ಲೇ ಇದ್ದರು. ಮಂಗಳವಾರ ಬೆಳಿಗ್ಗೆ ಮನೆಯಿಂದ ಹೊರಟಿದ್ದ ಅವರು ರಾತ್ರಿಯಾದರೂ ಮನೆಗೆ ವಾಪಸಾಗಿರಲಿಲ್ಲ. ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದಾಗ, ಕೋಟೇಶ್ವರ ದೇವಸ್ಥಾನದ ಸಮೀಪ ಅವರ ದ್ವಿಚಕ್ರ ವಾಹನ ಪತ್ತೆಯಾಗಿತ್ತು.





