September 24, 2026

ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ

0
image_editor_output_image1648839502-1790224572175

ಉಡುಪಿ ಸೆಪ್ಟೆಂಬರ್ 23: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಖ್ಯಾತ ವೀಕ್ಷಕ ವಿವರಣೆಕಾರ (Commentator) ಹಾಗೂ ಮಾಜಿ ಕೋಚ್ ರವಿಶಾಸ್ತ್ರಿ ಅವರು ಬುಧವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.


ಶ್ರೀ ಕೃಷ್ಣ ದೇವರ ದರ್ಶನ ಪಡೆದ ಬಳಿಕ ರವಿಶಾಸ್ತ್ರಿ ಅವರು ಶ್ರೀ ಕೃಷ್ಣ ಮಠದ ಪ್ರಸ್ತುತ ಪರ್ಯಾಯ ಶ್ರೀ ಶೀರೂರು ಮಠದ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಪರ್ಯಾಯ ಶ್ರೀಗಳು ರವಿಶಾಸ್ತ್ರಿ ಅವರಿಗೆ ಶೇಷ ವಸ್ತ್ರ ಹೊದಿಸಿ, ಫಲ ಮಂತ್ರಾಕ್ಷತೆ ನೀಡಿ ಗೌರವಿಸಿದರು.


ಇನ್ನು ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬುಧವಾರ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಮತ್ತು ಟೀಮ್ ಇಂಡಿಯಾದ ಮಾಜಿ ತರಬೇತುದಾರ ರವಿ ಶಾಸ್ತ್ರಿ ಭೇಟಿ ನೀಡಿ ದೇವರ ದರ್ಶನ ಪಡೆದರು. ಇದೇ ವೇಳೆ, ರವಿ ಶಾಸ್ತ್ರಿ ಅವರು ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿದರು. ಸ್ವಾಮೀಜಿಗಳು ರವಿ ಶಾಸ್ತ್ರಿ ಅವರಿಗೆ ಶಾಲು ಹೊದಿಸಿ ಫಲ ಮಂತ್ರಾಕ್ಷತೆ ನೀಡಿ ಹರಸಿದರು. ಈ ಸಂದರ್ಭ ಶಿರೂರು ಮಠದ ದಿವಾನ ಲಾತವ್ಯ ಆಚಾರ್, ಕುಕ್ಕೆ ದೇವಳದ ಅಧೀಕ್ಷಕ ಕೆ.ಎಂ. ಗೋಪಿನಾಥ್ ನಂಬೀಶ, ನಿವೃತ್ತ ಶಿಷ್ಟಾಚಾರ ಅಧಿಕಾರಿ ಎ. ವೆಂಕಟ್ರಾಜ್ ಮತ್ತಿತರರು ಉಪಸ್ಥಿತರಿದ್ದರು. ರವಿ ಶಾಸ್ತ್ರಿಯವರು ಪ್ರತಿ ವರ್ಷ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬರುವುದನ್ನು ರೂಢಿ ಮಾಡಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!