September 24, 2026

ಉಪ್ಪಿನಂಗಡಿ: ಲಂಚದ ಬೇಡಿಕೆ: ಆರ್ಯಾಪು ಗ್ರಾಮ ಪಂಚಾಯತ್‌ನ PDO ಅಮಾನತು

0
image_editor_output_image1203106623-1790225293885

ಉಪ್ಪಿನಂಗಡಿ:ಸಾರ್ವಜನಿಕ ಸೇವೆ ಒದಗಿಸುವಲ್ಲಿ ವಿಳಂಬ, ಭ್ರಷ್ಟಾಚಾರ, ಲಂಚದ ಬೇಡಿಕೆ, ಸಾರ್ವಜನಿಕರಿಗೆ ಬೆದರಿಕೆ ಹಾಗೂ ಅನುಚಿತ ವರ್ತನೆ ಸೇರಿದಂತೆ ಹಲವು ಆರೋಪಗಳ ಹಿನ್ನೆಲೆಯಲ್ಲಿ ಉಪ್ಪಿನಂಗಡಿ ಗ್ರಾಮ ಪಂಚಾಯತ್‌ನ ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿದ್ದ, ಪ್ರಸ್ತುತ ಆರ್ಯಾಪು ಗ್ರಾಮ ಪಂಚಾಯತ್‌ನ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವಿಲೈಡ್ ಲಾರೆನ್ಸ್ ರೊಡ್ರಿಗಸ್‌ ಅವರನ್ನು ಅಮಾನತುಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನರವಾಡೆ ವಿನಾಯಕ ಕಾರಭಾರಿ ಅವರು ಸೆ.22ರಂದು ಆದೇಶ ಹೊರಡಿಸಿದ್ದು, ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತು ಆದೇಶ ನೀಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!