September 24, 2026

ಮಂಗಳೂರು: 1.15 ಲಕ್ಷ ರೂ. ಮಾದಕ ವಸ್ತು ಸಹಿತ  ಆರೋಪಿ ಬಂಧನ

0
image_editor_output_image1656227670-1790247793650

ಮಂಗಳೂರು: ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು 36 ವರ್ಷದ ವ್ಯಕ್ತಿಯೊಬ್ಬನನ್ನು ಬಂಧಿಸಿ, ರೂ. 1.15 ಲಕ್ಷ ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, ಸೆ. 23ರಂದು ಸಂಜೆ ಮಂಗಳೂರು ತಾಲೂಕಿನ ಅರ್ಕುಳ ಜಂಕ್ಷನ್ ಬಳಿಯ ಯಶಸ್ವಿ ಹಾಲ್ ಎದುರು ರಾಷ್ಟ್ರೀಯ ಹೆದ್ದಾರಿ 73ರ ಬದಿಯಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.

ಈ ವೇಳೆ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಕಾಯುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಬಂಟ್ವಾಳ ತಾಲೂಕಿನ ಮೇರಮಜಲು ಗ್ರಾಮದ ವೈಶಾಲಿ ನಿಲಯದ ನಲದೆ ಮನೆ ನಿವಾಸಿ ಅಮ್ಮು ಪೂಜಾರಿ ಅವರ ಪುತ್ರ ಸುಭಾಷ್ (36) ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ವೇಳೆ ಆರೋಪಿಯಿಂದ 23.20 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್‌ಗಳು ಹಾಗೂ ಒಂದು ತೂಕದ ಮಾಪಕವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕ ದ್ರವ್ಯದ ಅಂದಾಜು ಮೌಲ್ಯ ರೂ. 1,15,000 ಎಂದು ಪೊಲೀಸರು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!