ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ SIT ರಚನೆ: ನೂತನ ತನಿಖಾ ತಂಡದಲ್ಲಿ ಮಂಗಳೂರು ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
ಬೆಳ್ತಂಗಡಿ: ಸೌಜನ್ಯ ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂಕೋರ್ಟ್ ಸೂಚನೆಯಂತೆ ಕರ್ನಾಟಕ ರಾಜ್ಯ ಸರ್ಕಾರವು ಸೆಪ್ಟೆಂಬರ್ 24, 2026ರಂದು ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ.

ಹೊಸದಾಗಿ ರಚಿಸಲಾಗಿರುವ SITಗೆ ಪೊಲೀಸ್ ಮಹಾ ನಿರೀಕ್ಷಕ ಎನ್. ಶಶಿಕುಮಾರ್ ಅವರನ್ನು ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
SIT ಸದಸ್ಯರು:
ಮಂಗಳೂರು ಪೊಲೀಸ್ ಕಮಿಷನರ್ ಸಿ.ಹೆಚ್. ಸುಧೀರ್ ಕುಮಾರ್ ರೆಡ್ಡಿ, ರಾಜ್ಯ ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕಿ ನಿಶಾ ಜೇಮ್ಸ್ IPS, ಬೆಂಗಳೂರು CID ಪೊಲೀಸ್ ಅಧೀಕ್ಷಕ ಲೋಕೇಶ್ ಜಲಸಾಗರ್ IPS, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ವೆಂಕಟೇಶ್ ಪ್ರಸನ್ನ ಇವರು ಸೌಜನ್ಯ ಪ್ರಕರಣದ ಮರುತನಿಖೆ ನಡೆಸಲಿರುವ ವಿಶೇಷ ತನಿಖಾ ತಂಡದ ಸದಸ್ಯರಾಗಿರುತ್ತಾರೆ.





