September 25, 2026

ಉಡುಪಿ: ಪೆಟ್ರೋಲ್ ಪಂಪ್ ಬಳಿ  ನಿಲ್ಲಿಸಲಾಗಿದ್ದ ಬಸ್‌ ಗೆ ಆಕಸ್ಮಿಕ ಬೆಂಕಿ: ತಪ್ಪಿದ ಭಾರೀ ಅನಾಹುತ

0
image_editor_output_image2106735342-1790312046703

ಉಡುಪಿ: ಮಣಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೆಂದೂರುಕಟ್ಟೆ ಎಂಬಲ್ಲಿ ಪೆಟ್ರೋಲ್ ಪಂಪ್ ಬಳಿ ಸಾಲಾಗಿ ನಿಲ್ಲಿಸಲಾಗಿದ್ದ ಬಸ್‌ ಒಂದರಲ್ಲಿ ಶುಕ್ರವಾರ ಬೆಳಗಿನ ಜಾವ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ರೂಪಾಯಿ ಹಾನಿ ಸಂಭವಿಸಿದೆ. ಪೆಟ್ರೋಲ್ ಪಂಪ್ ಸಿಬ್ಬಂದಿಯ ಜಾಗರೂಕತೆ ಹಾಗೂ ಸಮಯಪ್ರಜ್ಞೆಯಿಂದಾಗಿ ಜರುಗಬಹುದಾಗಿದ್ದ ಭಾರಿ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.

ದೆಂದೂರುಕಟ್ಟೆಯ ಪೆಟ್ರೋಲ್ ಪಂಪ್ ಆವರಣದ ಬಳಿ ಬಸ್ ನಿಲ್ಲಿಸಲಾಗಿತ್ತು. ಬೆಳಗಿನ ಜಾವ ಬಸ್‌ನಲ್ಲಿ ಏಕಾಏಕಿ ಬೆಂಕಿ ಜ್ವಾಲೆಗಳು ಏಳುತ್ತಿರುವುದನ್ನು ಗಮನಿಸಿದ ಪೆಟ್ರೋಲ್ ಪಂಪ್‌ನ ಸಿಬ್ಬಂದಿ ತಕ್ಷಣವೇ ಕಾರ್ಯಪ್ರವೃತ್ತರಾಗಿದ್ದಾರೆ. ವಿಳಂಬ ಮಾಡದೆ ತಕ್ಷಣ ಬೆಂಕಿ ನಂದಿಸುವ ಉಪಕರಣಗಳನ್ನು ಬಳಸಿ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತಂದಿದ್ದಾರೆ.

 

ಬೆಂಕಿ ಅವಘಡ ಸಂಭವಿಸಿದ ಬಸ್‌ನ ತೀರಾ ಹತ್ತಿರದಲ್ಲೇ ಇನ್ನುಳಿದ ಎರಡು ಖಾಸಗಿ ಬಸ್‌ಗಳು ಹಾಗೂ ಒಂದು ಟೆಂಪೋವನ್ನು ಸಾಲಾಗಿ ನಿಲ್ಲಿಸಲಾಗಿತ್ತು. ಅಷ್ಟೇ ಅಲ್ಲದೆ, ಕೆಲವೇ ಮೀಟರ್ ಅಂತರದಲ್ಲಿ ಪೆಟ್ರೋಲ್ ಪಂಪ್ ಇತ್ತು. ಒಂದು ವೇಳೆ ಬೆಂಕಿ ಪಕ್ಕದ ವಾಹನಗಳಿಗೆ ಹಾಗೂ ಪೆಟ್ರೋಲ್ ಪಂಪ್‌ಗೆ ಆವರಿಸಿದ್ದರೆ ಇಡೀ ಪ್ರದೇಶವೇ ಸ್ಫೋಟಗೊಂಡು ಭಾರಿ ದುರಂತ ಸಂಭವಿಸುವ ಸಾಧ್ಯತೆಯಿತ್ತು. ಸಿಬ್ಬಂದಿ ಕ್ಷಣಾರ್ಧದಲ್ಲಿ ಬೆಂಕಿ ನಂದಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಹಾನಿಗೊಳಗಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಬೆಂಕಿ ಅವಘಡಕ್ಕೆ ನಿಖರವಾದ ಕಾರಣ (ಶಾರ್ಟ್ ಸರ್ಕ್ಯೂಟ್ ಅಥವಾ ಇತರ ಲೋಪ) ಏನೆಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

Leave a Reply

Your email address will not be published. Required fields are marked *

error: Content is protected !!