September 25, 2026

ನರ್ಸಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು

0
image_editor_output_image1220113521-1790312853668

ಹೈದರಾಬಾದ್: 18 ವರ್ಷದ ನರ್ಸಿಂಗ್ ಪ್ರಥಮ ವರ್ಷದ ವಿದ್ಯಾರ್ಥಿನಿಯೊಬ್ಬಳು  ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ತೆಲಂಗಾಣದ  ಜುಲುರುಪಾಡು ಮಂಡಲದ ವೆಂಗಣ್ಣಪಾಲೆಂ ಗ್ರಾಮದಲ್ಲಿ ನಡೆದಿದೆ.

ಮೃತ ಯುವತಿಯನ್ನು ಹರಿಣಿ ಎಂದು ಗುರುತಿಸಲಾಗಿದೆ. ಖಮ್ಮಂ ಪ್ರದೇಶದ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಹರಿಣಿ, ರಜೆ ಹಿನ್ನೆಲೆಯಲ್ಲಿ ಇತ್ತೀಚೆಗೆ ತನ್ನ ಸ್ವಗ್ರಾಮಕ್ಕೆ ಮರಳಿದ್ದಳು.

 

ಹರಿಣಿ ಮನೆಯಲ್ಲಿ ಕಾಣಿಸದ ಹಿನ್ನೆಲೆಯಲ್ಲಿ ಆಕೆಯ ತಾಯಿ ರಾಜೇಶ್ವರಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಮನೆಯ ಆವರಣದಲ್ಲಿರುವ ಬಾತ್‌ರೂಮ್ ಹಿಂಭಾಗದಲ್ಲಿ ಹರಿಣಿ ಮೃತಪಟ್ಟಿರುವುದು ಪತ್ತೆಯಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ಹಾಗೂ ಸಾಕ್ಷ್ಯ ಸಂಗ್ರಹಣಾ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

Leave a Reply

Your email address will not be published. Required fields are marked *

error: Content is protected !!