September 25, 2026

ಬಂಟ್ವಾಳ: ರಸ್ತೆಗೆ ಬಿದ್ದ ಗೋಳಿ ಮರ

0
image_editor_output_image1776998700-1790339606935

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ ಸಮೀಪ ಬಿಸಿರೋಡು–ಮೂಡುಬಿದಿರೆ ರಸ್ತೆಗೆ ಗೋಳಿ ಮರವೊಂದು ಅಡ್ಡವಾಗಿ ಬಿದ್ದ ಪರಿಣಾಮ ಶುಕ್ರವಾರ ಬೆಳಗ್ಗೆ ಸುಮಾರು ಒಂದು ತಾಸು ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

ಪ್ರಮುಖ ರಸ್ತೆಯಾಗಿರುವ ಇಲ್ಲಿ ಬೆಳಗ್ಗೆ ಮರ ಬಿದ್ದಿದ್ದರಿಂದ ಶಾಲಾ ಮಕ್ಕಳು, ಉದ್ಯೋಗಕ್ಕೆ ತೆರಳುವವರು ಸೇರಿದಂತೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಯಿತು. ರಸ್ತೆ ಮಧ್ಯೆ ಮರ ಬಿದ್ದ ಕಾರಣ ವಾಹನಗಳು ಸಂಚರಿಸಲು ಸಾಧ್ಯವಾಗದೆ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು.

ರಾಯಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸಂತೋಷ್ ರಾಯಿಬೆಟ್ಟು ಅವರ ನೇತೃತ್ವದಲ್ಲಿ ಸ್ಥಳೀಯರ ತಂಡ ಮರವನ್ನು ತೆರವುಗೊಳಿಸಿ, ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಆದರೆ ಘಟನೆಯಿಂದ ಯಾವುದೇ ಅಪಾಯ ಅಥವಾ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

 

Leave a Reply

Your email address will not be published. Required fields are marked *

You may have missed

error: Content is protected !!