September 25, 2026

ಬಂಟ್ವಾಳ: ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣ: ಕಲ್ಲಡ್ಕ ಪ್ರಭಾಕರ್ ಭಟ್ಗೆ ನೋಟಿಸ್

0
image_editor_output_image1777922221-1790344783898

ಮಂಗಳೂರು: ಬಂಟ್ವಾಳ ಅಬ್ದುಲ್ ರೆಹಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ನೋಟಿಸ್ ನೀಡಲಾಗಿದೆ. ಪೊಲೀಸ್ ಇಲಾಖೆಯಿಂದ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

2025 ಮೇ 25 ರಂದು ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್ ಹತ್ಯೆಯಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ಗೆ ನೋಟಿಸ್ ನೀಡಲಾಗಿದೆ.ನಾಳೆ (ಸೆ.26) ಕಲ್ಲಡ್ಕದ ಮನೆಯಲ್ಲೇ ಪ್ರಭಾಕರ್ ಭಟ್ ಅವರನ್ನು ತನಿಖಾಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾಕೋಡಿ (ಕುರಿಯಾಲ ಗ್ರಾಮ) ಬಳಿ 2025ರ ಮೇ 25ರಂದು ಅಬ್ದುಲ್ ರೆಹಮಾನ್ ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪಿಕ್‌ಅಪ್ ಟ್ರಕ್‌ನಿಂದ ಮರಳು ಇಳಿಸುತ್ತಿದ್ದ ವೇಳೆ ಅಬ್ದುಲ್ ರೆಹಮಾನ್ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಭೀಕರವಾಗಿ ಕೊಲೆ ಮಾಡಲಾಗಿತ್ತು. ಮೃತ ಅಬ್ದುಲ್ ಜೊತೆ ಕಲಂದರ್ ಶಫಿ ಮೇಲೆ ಗಂಭೀರ ಹಲ್ಲೆ ನಡೆಸಲಾಗಿತ್ತು.

ಇನ್ನು ಪ್ರಭಾಕರ್ ಭಟ್ ಅವರಿಗೆ ನೋಟಿಸ್ ಜಾರಿ ಮಾಡಿದ್ದಕ್ಕೆ ವಿಹೆಚ್ಪಿ ಮುಖಂಡ ಶರಣ್ ಪಂಪ್ ವೆಲ್ ಆಕ್ರೋಶ ವಕ್ತಪಡಿಸಿದ್ದಾರೆ. ಅಬ್ದುಲ್ ರೆಹಮಾನ್ ಹತ್ಯೆಗೂ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಏನು ಸಂಬಂಧ? ಕಾಂಗ್ರೆಸ್ ರಾಜಕೀಯ ಪ್ರೇರಿತವಾಗಿ ಹಿಂದೂ ಸಂಘಟನೆಯನ್ನ ಟಾರ್ಗೆಟ್ ಮಾಡುತ್ತಿದೆ. ಯಾರನ್ನೋ ಮೆಚ್ಚಿಸಲು ನಮ್ಮನ್ನು ಟಾರ್ಗೆಟ್ ಮಾಡಿದೆ. ಮುಂದಿನ ದಿನಗಳಲ್ಲಿ ಇದರ ಪರಿಣಾಮ ಅನುಭವಿಸುತ್ತಾರೆ. ನಮ್ಮ ಸಂಘಟನೆ ರಾಷ್ಟ್ರಕ್ಕೋಸ್ಕರ ಕೆಲಸ ಮಾಡುವ ಸಂಘಟನೆ. ನಮ್ಮನ್ನ ಮುಗಿಸುವ ಹುನ್ನಾರ ಮಾಡಿದ್ರೆ ಹಿಂದೂ ಬಾಂಧವರು ಉತ್ತರಿಸುತ್ತಾರೆ ಎಂದು ಹೇಳಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!