September 26, 2026

ಬಂಟ್ವಾಳ: ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ: ಮೂವರು ಆರೋಪಿ ಅರೆಸ್ಟ್

0
image_editor_output_image2088177147-1790392315317

ಬಂಟ್ವಾಳ: ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ಎಂಬಲ್ಲಿ ವ್ಯಕ್ತಿಯೊಬ್ಬರ ಮೇಲೆ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಯತ್ನ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸೆಪ್ಟೆಂಬರ್ 25 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯವು ಆರೋಪಿಗಳನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಪ್ರಶಾಂತ್ (38) – ನಿವಾಸಿ: ಅಮ್ಮುಂಜೆ, ಬಂಟ್ವಾಳ ರಾಮದಾಸ್ (43) – ನಿವಾಸಿ: ತೆಂಕಬೆಳ್ಳೂರು, ಬಂಟ್ವಾಳ ಶಂಕರ (45) – ನಿವಾಸಿ: ಬಡಗಬೆಳ್ಳೂರು, ಬಂಟ್ವಾಳ

 

ಬಂಟ್ವಾಳದ ತೆಂಕಬೆಳ್ಳೂರು ಗ್ರಾಮದ ಪ್ರಶಾಂತ್ ಬೆಳ್ಚಾಡ್ (41) ಹಲ್ಲೆಗೊಳಗಾದ ದೂರುದಾರರಾಗಿದ್ದಾರೆ. ಸೆಪ್ಟೆಂಬರ್ 20 ರಂದು ಸಂಜೆ ವೇಳೆ ಪ್ರಶಾಂತ್ ಬೆಳ್ಚಾಡ್ ಅವರು ಕಮ್ಮಾಜೆ ಎಂಬಲ್ಲಿದ್ದಾಗ, ಆಟೋರಿಕ್ಷಾದಲ್ಲಿ ಬಂದ ಅವರ ಪರಿಚಯಸ್ಥರಾದ ಆರೋಪಿಗಳಾದ ಪ್ರಶಾಂತ್, ರಾಮದಾಸ್ ಹಾಗೂ ಶಂಕರ ಏಕಾಏಕಿ ದಾಳಿ ನಡೆಸಿದ್ದಾರೆ. ತಮ್ಮಲ್ಲಿದ್ದ ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಪ್ರಶಾಂತ್ ಬೆಳ್ಚಾಡ್ ಅವರಿಗೆ ತೀವ್ರ ರಕ್ತಗಾಯಗಳಾಗಿದ್ದವು.

ಈ ವೇಳೆ ಸಾರ್ವಜನಿಕರು ಹಾಗೂ ಗಾಯಾಳುವಿನ ಪರಿಚಯಸ್ಥರು ಸ್ಥಳಕ್ಕೆ ಬರುತ್ತಿರುವುದನ್ನು ಕಂಡ ಆರೋಪಿಗಳು ಮಾರಕಾಸ್ತ್ರಗಳನ್ನು ಬಿಟ್ಟು ಸ್ಥಳದಿಂದ ಓಡಿಹೋಗಿದ್ದರು. ತೀವ್ರ ಗಾಯಗೊಂಡಿದ್ದ ಪ್ರಶಾಂತ್ ಬೆಳ್ಚಾಡ್ ಅವರನ್ನು ತಕ್ಷಣವೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಾಳು ನೀಡಿದ ದೂರಿನ ಆಧಾರದ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 124/2026 ಹಾಗೂ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 109 (ಕೊಲೆಯತ್ನ), 352, 351 ಜೊತೆಗೆ 3(5) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂವರನ್ನೂ ಹೆಡೆಮುರಿ ಕಟ್ಟಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ತನಿಖೆ ಹಾಗೂ ಕೃತ್ಯಕ್ಕೆ ಬಳಸಿದ ಶಸ್ತ್ರಾಸ್ತ್ರಗಳ ಮಹಜರಿಗಾಗಿ ನ್ಯಾಯಾಲಯವು ಆರೋಪಿಗಳನ್ನು 3 ದಿನಗಳ ಕಾಲ Police Custody ನೀಡಿದೆ.

Leave a Reply

Your email address will not be published. Required fields are marked *

error: Content is protected !!