ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದ ಪ್ರಕರಣ: ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು
ಮಂಗಳೂರು: ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ನನ್ ಹಾಲ್‌ನಲ್ಲಿ ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಗಾಯಗೊಂಡಿದ್ದ ವಿದ್ಯಾರ್ಥಿ ಶಮ್ಮಾಝ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಶಮ್ಮಾಝ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರ ತಂದೆಯ ದೂರಿನ ಮೇರೆಗೆ, ಕಟ್ಟಡದ ಮಾಲೀಕ ಹಾಗೂ ಕಾರ್ಯಕ್ರಮದ ಸಂಘಟಕರ ವಿರುದ್ಧ ನಿರ್ಲಕ್ಷ್ಯದಿಂದ ಸಾವು ಸಂಭವಿಸಿದ ಆರೋಪದಡಿ BNS ಸೆಕ್ಷನ್ 106(1), 125(a), 125(b) ಮತ್ತು 290 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.





