September 28, 2026

ದೇಶವ್ಯಾಪಿ ಬ್ಯಾಂಕ್ ಮುಷ್ಕರ ಮುಂದೂಡಿಕೆ

0
image_editor_output_image1524683327-1790536675117

ನವದೆಹಲಿ: ಭಾರತೀಯ ಬ್ಯಾಂಕ್‌ಗಳ ಒಕ್ಕೂಟ ಮತ್ತು ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ ನಡುವೆ ಇಂದು ರಾತ್ರಿ ನಡೆದ ಸಭೆ ಯಶಸ್ವಿಯಾಗಿದ್ದು ಮೂರು ದಿನಗಳ ದೇಶವ್ಯಾಪಿ ಬ್ಯಾಂಕ್ ಮುಷ್ಕರವನ್ನು ಮುಂದೂಡಲಾಗಿದೆ.

ಮುಷ್ಕರದ ಕರೆಯನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರವು ಬ್ಯಾಂಕ್ ನೌಕರರಿಗೆ ಮನವಿ ಮಾಡಿದ್ದು, ಅವರ ಬಹುತೇಕ ಸಮಸ್ಯೆಗಳನ್ನು ಈಗಾಗಲೇ ಮಾತುಕತೆ ಮತ್ತು ಕಲ್ಯಾಣ ಕ್ರಮಗಳ ಮೂಲಕ ಬಗೆಹರಿಸಲಾಗಿದೆ ಎಂದು ತಿಳಿಸಿದೆ.

 

ಸೆಪ್ಟೆಂಬರ್ 28 ರಿಂದ 30ರ ಅವಧಿಯಲ್ಲಿ ಮುಷ್ಕರ ನಡೆಸಿದರೆ ಅದು ಬ್ಯಾಂಕಿಂಗ್ ಕಾರ್ಯಾಚರಣೆಯ ಮೇಲೆ ತೀವ್ರ ಪರಿಣಾಮ ಬೀರಲಿದೆ. ಇದು ಬ್ಯಾಂಕುಗಳ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯ ಸಮಯವಾಗಿದೆ ಎಂದು ಸರ್ಕಾರ ಎಚ್ಚರಿಕೆ ನೀಡಿತ್ತು.

Leave a Reply

Your email address will not be published. Required fields are marked *

error: Content is protected !!