September 28, 2026

ಮಂಗಳೂರು ಮೂಲದ ಕಾರು ಚರಂಡಿಗೆ ಬಿದ್ದು ಪಲ್ಟಿ

0
image_editor_output_image985224776-1790537758470

ಆನಂದಪುರ: ಹಾವು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕಾರು; ಅಪಾಯದಿಂದ ಪಾರಾದ ದಂಪತಿ ಹಾಗೂ ಮಗು.

ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಡ್ಡ ಬಂದ ಹಾವನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ಕಳೆದುಕೊಂಡು ಚರಂಡಿಗೆ ಪಲ್ಟಿ ಹೊಡೆದ ಘಟನೆ ಭಾನುವಾರ ನಡೆದಿದೆ.

 

ಮಂಗಳೂರು ಮೂಲದ ಗಂಡ, ಹೆಂಡತಿ ಹಾಗೂ ಮಗು ಕಾರಿನಲ್ಲಿ ಸಾಗರದಿಂದ ಆನಂದಪುರದ ಕಡೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಸಿದ್ದೇಶ್ವರ ಕಾಲೋನಿ ಬಳಿ ರಾಷ್ಟ್ರೀಯ ಹೆದ್ದಾರಿಗೆ ಅಡ್ಡವಾಗಿ ಬಂದ ಹಾವನ್ನು ತಪ್ಪಿಸಲು ಹೋಗಿ ಕಾರು ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿ ಹಾಗೂ ಮಗು ಅಪಾಯದಿಂದ ಪಾರಾಗಿದ್ದಾರೆ. ಕಾರು ಪಲ್ಟಿಯಾದ ತಕ್ಷಣ ಸ್ಥಳೀಯ ಸಾರ್ವಜನಿಕರು ಧಾವಿಸಿ ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. 3 ಜನರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಈ ಪ್ರಕರಣ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Leave a Reply

Your email address will not be published. Required fields are marked *

error: Content is protected !!