September 29, 2026

ಜಮೀನಿಗಾಗಿ ನಡೆದ ಜಗಳ ತಮ್ಮನನ್ನು ಕೊಲೆಗೈದ ಅಣ್ಣ

0
image_editor_output_image494702890-1790623676177

ಹಾಸನ: ಸಹೋದರರ ನಡುವೆ ಜಮೀನಿಗಾಗಿ ನಡೆದ ಜಗಳ ತಮ್ಮನ ಕೊಲೆಯಲ್ಲಿ ಅಂತ್ಯವಾಗಿದ ಘಟನೆ ಬೇಲೂರು  ತಾಲೂಕಿನ ಸೋಂಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ರಘು (44) ಅಣ್ಣನಿಂದಲೇ ಕೊಲೆಯಾದ ವ್ಯಕ್ತಿ. ದೇವರಾಜ್ (46) ಕೊಲೆಗೈದ  ಆರೋಪಿಯಾಗಿದ್ದಾನೆ. ಸೆ.24 ರಂದು ಜಮೀನು ವಿವಾದ ಹಾಗೂ ನ್ಯಾಯಬೆಲೆ ಅಂಗಡಿಯಿಂದ ಪಡಿತರ ತಂದ ವಿಚಾರಕ್ಕೆ ಸಹೋದರರ ನಡುವೆ ಜಗಳ ನಡೆದಿತ್ತು.

 

ಜಗಳ ವಿಕೋಪಕ್ಕೆ ತಿರುಗಿ ತಮ್ಮ ರಘುಗೆ ಅಣ್ಣ ದೇವರಾಜ್ ಚಾಕುವಿನಿಂದ ಇರಿದಿದ್ದ. ತೀವ್ರವಾಗಿ ಗಾಯಗೊಂಡಿದ್ದ ರಘು ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ರಘು ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

error: Content is protected !!