November 23, 2026

ಮೂಡಿಗೆರೆ: ಮದುವೆಗೆ ತಯಾರಿ ನಡೆಸಿದ್ದ ಯುವಕ ಆತ್ಮಹತ್ಯೆ

0
image_editor_output_image840029140-1790709520692

ಚಿಕ್ಕಮಗಳೂರು: ಒಂದು ತಿಂಗಳ ಹಿಂದಷ್ಟೇ ಮದುವೆ ನಿಶ್ಚಯವಾಗಿ, ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೂಡಿಗೆರೆ  ತಾಲೂಕಿನ ಮಧುಗುಂಡಿ ಗ್ರಾಮದಲ್ಲಿ ನಡೆದಿದೆ.

ಅಭಿಷೇಕ್ (25) ಆತ್ಮಹತ್ಯೆಗೆ ಶರಣಾದ ಯುವಕ. ಈತನಿಗೆ ಕಳೆದ ತಿಂಗಳಷ್ಟೆ ಮದುವೆ ನಿಶ್ಚಯವಾಗಿತ್ತು. ಮುಂದಿನ ತಿಂಗಳು 25ಕ್ಕೆ ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಎರಡೂ ಮನೆಯವರು ಮದುವೆ ಸಂಭ್ರಮದಲ್ಲಿ ಸಿದ್ಧತೆ ಮಾಡಿಕೊಳ್ಳುತ್ತಿದ್ದರು.

ಆದರೆ ಕಳೆದ 4 ದಿನದ ಹಿಂದೆ ಮನೆಯಲ್ಲೇ ಯುವಕ ಮನೆಯಲ್ಲೇ ವಿಷ ಸೇವಿಸಿದ್ದ. ಆತನನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ.

Leave a Reply

Your email address will not be published. Required fields are marked *

You may have missed

error: Content is protected !!