ಮಂಗಳೂರು: MRPL ಭಾಗದಲ್ಲಿ ಬುಧವಾರ ಸಂಭವಿಸಿದ ಭಾರೀ ಸ್ಫೋಟಕ್ಕೆ ಜೋಕಟ್ಟೆ ಸುತ್ತಮುತ್ತಲಿನ ಹಲವು ಮನೆಗಳು ಹಾಗೂ ಕಟ್ಟಡಗಳು ಕಂಪಿಸಿವೆ.
ಸ್ಫೋಟದ ತೀವ್ರತೆಗೆ ಮನೆಗಳ ಬಾಗಿಲು, ಕಿಟಕಿ ಹಾಗೂ ಗಾಜುಗಳು ಹಾನಿಗೊಳಗಾಗಿದ್ದು, ಕೆಲವು ಕಟ್ಟಡಗಳ ಗೋಡೆಗಳಿಗೂ ಹಾನಿಯಾಗಿದೆ ಎನ್ನಲಾಗಿದೆ. ಬಜಪೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಸ್ಫೋಟದ ಕಂಪನ ಅನುಭವವಾಗಿದೆ.