November 22, 2026

ಮಂಗಳೂರು: ಮರ್ಪಲ್ ಭೀಕರ ಸ್ಫೋಟ ಪ್ರಕರಣ: ಎಂಟು ಮಂದಿ ಗಾಯ: ಸುಧೀರ್ ಕುಮಾರ್ ರೆಡ್ಡಿ ಮಾಹಿತಿ

0
image_editor_output_image-490297167-1790769261897

ಮಂಗಳೂರು: ಮಂಗಳೂರು ಎಂಆರ್‌ಪಿಎಲ್‌ ರಿಫೈನರಿ ಆಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (ಎಂಆರ್‌ಪಿಎಲ್‌ )ನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಭಾರೀ ಸ್ಫೋಟದಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇಂದು ಮಧ್ಯಾಹ್ನ 12:15ರ ಸುಮಾರಿಗೆ ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋ ಟ್ರೀಟಿಂಗ್ ಘಟಕದಲ್ಲಿ ಭಾರಿ ಸ್ಫೋಟದ ನಂತರ ಬೆಂಕಿ ಕಾಣಿಸಿಕೊಂಡಿದೆ. ಈ ವೇಳೆ ಘಟಕದಲ್ಲಿ ಇಬ್ಬರು ಗಾಯಗೊಂಡಿದ್ದಾರೆ.

ಈ ಪೈಕಿ ರಾಜೇಶ್ ಬ್ಯಾಪ್ಟಿಸ್ಟ್ ಎಂಬುವರಿಗೆ 35 ಶೇ. ಸುಟ್ಟ ಗಾಯಗಳಾಗಿವೆ. ಅವರನ್ನು ಚಿಕಿತ್ಸೆಗಾಗಿ ಶ್ರೀನಿವಾಸ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಪ್ರಕಾರ ಅವರು ಅಪಾಯದಿಂದ ಪಾರಾಗಿದ್ದು, ತೀವ್ರ ನಿಗಾ ಘಟಕದಲ್ಲಿ (ICU) ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದವರು ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿದ ಘಟಕದ ಪಕ್ಕದ ಕಚೇರಿಯಲ್ಲಿದ್ದ ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಿಸಲಾಗಿದೆ. ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಓ ನರ್ವಡೆ ವಿನಾಯಕ್ ಕಾರ್ಭಾರಿ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!