September 30, 2026

ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image1098615020-1790776999257

ಸುಳ್ಯ: ನ್ಯಾಯಾಲಯಕ್ಕೆ ಹಾಜರಾಗದೆ ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸುಳ್ಯ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದಾಖಲಾಗಿದ್ದ ಅಪರಾಧ ಪ್ರಕರಣ ಸಂಖ್ಯೆ 33/2021ರಲ್ಲಿ ಐಪಿಸಿ ಕಲಂ 354, 323, 324, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

 

ಪ್ರಕರಣಕ್ಕೆ ಸಂಬಂಧಿಸಿದಂತೆ ಕನಕಮಜಲು ನಿವಾಸಿ ಸುರೇಂದ್ರ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಖಚಿತ ಮಾಹಿತಿಯ ಮೇರೆಗೆ ಸುಳ್ಯ ಠಾಣೆಯ ಹೆಡ್ ಕಾನ್‌ಸ್ಟೆಬಲ್ 368 ರಾಜು ನಾಯ್ಕ್ ಡಿ. ಹಾಗೂ ಪೊಲೀಸ್ ಕಾನ್‌ಸ್ಟೆಬಲ್ 1020 ಸೋಮಯ್ಯ ಹಿರೇಮಠ ಅವರು ಆಲಟ್ಟಿ ಎಂಬಲ್ಲಿ ಸುರೇಂದ್ರನನ್ನು ಬಂಧಿಸಿದ್ದಾರೆ.ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!